ಪಿಣರಾಯಿ ವಿಜಯನ್ ವಿರುದ್ಧದ ‘ರಾಜಕೀಯ ಬೇಟೆ’ ಖಂಡಿಸಿ ಹೊಸಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಹೊಸಂಗಡಿ: ಕೇರಳದ ವಿರೋಧ ಪಕ್ಷ ನಾಯಕರು ಹಾಗೂ ಸಿಪಿಐಎಂ ಪೊಲಿಟ್ ಬ್ಯೂರೋ ಸದಸ್ಯರಾದ Pinarayi Vijayan ಅವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ED ಅನ್ನು ಬಳಸಿಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಬೇಟೆ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಟೌನ್‌ನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಲು ಇಂತಹ ಕ್ರಮಗಳ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.

ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಸಿಜಿ ಮ್ಯಾಥ್ಯು ಹಾಗೂ ಸಿಪಿಐಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಪ್ರತಿಭಟನೆಗೆ ನೇತೃತ್ವ ನೀಡಿದರು. ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!