ಮಂಜೇಶ್ವರ : ಮಾದಕ ವಸ್ತುಗಳ ವಿರುದ್ಧ ಕಠಿಣ ಸಮರ ಸಾರಿರುವ ಮಂಜೇಶ್ವರ ಪೊಲೀಸರು, ಮತ್ತೊಂದು ಕಾರ್ಯಾಚರಣೆಯಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆಯ ಬಿಸ್ಮಿಲ್ಲಾ ಮಂಜಿಲ್ ನಿವಾಸಿ ಮೊಹಮ್ಮದ್ ಸಮೀರ್ ಪಿ.ಎ (30) ಬಂಧಿತ ಆರೋಪಿ.
ಖಚಿತ ಮಾಹಿತಿ ಮೇರೆಗೆ ಬಪ್ಪಾಯಿತೊಟ್ಟಿಯಲ್ಲಿ ನಡೆಸಿದ ದಾಳಿಯ ವೇಳೆ, ಈತನಿಂದ 5.080 ಗ್ರಾಂ ಎಂಡಿಎಂಎ ಹಾಗೂ ಮಾರಾಟದ ಹಣ 55,860 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಜೇಶ್ವರ ಪೋಲೀಸರ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಆರೋಪಿಯ ವಿರುದ್ಧ ಈಗಾಗಲೇ ಕಾಸರಗೋಡು ನಗರ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ಇದೇ ರೀತಿಯ ಪ್ರಕರಣಗಳು ದಾಖಲಾಗಿವೆ.