ಮುಲ್ಕಿಯಲ್ಲಿ ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

2026ರ ಮೇ 18ರಂದು ಮುಲ್ಕಿ ಜಂಕ್ಷನ್ ಸಮೀಪದ ಅಪೋಲೊ ಫಾರ್ಮಾ ಬಳಿ ನಿಲ್ಲಿಸಿದ್ದ ಕೆಎ 20 ಇಬಿ 6383 ಸಂಖ್ಯೆಯ ಹೋಂಡಾ ಯುನಿಕಾರ್ನ್ ಬೈಕ್ ಕಳವು ಆಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳಾದ ಮೊಹಮ್ಮದ್ ರಾಝಿಕ್ (36) ಹಾಗೂ ಉಬೈದತ್ ಹೈದರ್ (31)ರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು ₹20 ಸಾವಿರ ಮೌಲ್ಯದ ಹೋಂಡಾ ಯುನಿಕಾರ್ನ್ ಬೈಕ್ ಹಾಗೂ ಸುಮಾರು ₹18 ಸಾವಿರ ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ಕ್ರೈಂ ತಂಡ ನಡೆಸಿದೆ.

ಆರೋಪಿಗಳ ಹಿನ್ನೆಲೆ

ಪೊಲೀಸರ ಮಾಹಿತಿ ಪ್ರಕಾರ, ಮೊಹಮ್ಮದ್ ರಾಝಿಕ್ ವಿರುದ್ಧ ಸುರತ್ಕಲ್, ಪಣಂಬೂರು ಹಾಗೂ ಮುಲ್ಕಿ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ.

ಇನ್ನೊಬ್ಬ ಆರೋಪಿ ಉಬೈದತ್ ಹೈದರ್ ವಿರುದ್ಧ ಪಣಂಬೂರು ಠಾಣೆಯಲ್ಲಿ ಗಲಭೆ, ಹಲ್ಲೆ, ಬೆದರಿಕೆ ಸೇರಿದಂತೆ ಹಲವು ಐಪಿಸಿ ಕಲಂಗಳಡಿ ಹಲವು ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!