ಕೊರಿಂಗಿಲ ಜುಮಾ ಮಸೀದಿಯಲ್ಲಿ ಭಕ್ತಿಭಾವದಿಂದ ಬಕ್ರೀದ್ ಆಚರಣೆ

ಪುತ್ತೂರು/ಬೆಟ್ಟಂಪಾಡಿ: ಕೊರಿಂಗಿಲ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಮಸೀದಿಯ ಖತೀಬರಾದ ಬಹು| ಅಲ್ಹಾಜ್ ಜಿ.ಎಚ್. ಅಯ್ಯೂಬ್ ವಹಬಿ ಉಸ್ತಾದರು ಈದ್ ಪ್ರಾರ್ಥನೆಗೆ ನೇತೃತ್ವ ವಹಿಸಿ, ತ್ಯಾಗ, ಸಮರ್ಪಣೆ, ಶಾಂತಿ, ಮಾನವೀಯತೆ ಹಾಗೂ ಕರುಣೆಯ ಪ್ರತೀಕವಾದ ಬಕ್ರೀದ್ ಹಬ್ಬದ ಮಹತ್ವವನ್ನು ವಿವರಿಸಿದರು. ಇದೇ ವೇಳೆ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಪ್ರಾರ್ಥನೆಯಲ್ಲಿ ಕೊರಿಂಗಿಲ ಜುಮಾ ಮಸೀದಿ ಆಡಳಿತ ಸಮಿತಿಯ ಪದಾಧಿಕಾರಿಗಳು, ಜಮಾತ್ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದರು.

ಈದ್ ನಮಾಝಿನ ಬಳಿಕ ನೂರಾರು ಮಂದಿ ಪರಸ್ಪರ ಈದ್ ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬದ ಸಂಭ್ರಮ ಹಂಚಿಕೊಂಡರು.

SHARE
Loading spinner

Leave a Reply

Your email address will not be published. Required fields are marked *

error: Content is protected !!