ಯು.ಟಿ ಫರೀದ್ ಫೌಂಡೇಶನ್ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಇವುಗಳ ಆಶ್ರಯದಲ್ಲಿ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ಹಾಗೂ ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ಉಳ್ಳಾಲ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ತೊಕ್ಕೊಟ್ಟು ಯುನಿಟಿ ಸಭಾಂಗಣದಲ್ಲಿ ನಡೆಯಿತು.
ಸ್ಪೀಕರ್ ಡಾ. ಯುಟಿ ಖಾದರ್ ಫರೀದ್ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ಹಾಗೂ ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ಉಳ್ಳಾಲ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ದಲ್ಲಿ ದ.ಕ. ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರೂ,ಅತ್ಯಧಿಕ ಫಲಿತಾಂಶ ಬಂದಿರುವುದು ಉಳ್ಳಾಲ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಆಗಿವೆ 2024-2025 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 279995 ವಿದ್ಯಾರ್ಥಿಗಳಲ್ಲಿ 2469 ವಿದ್ಯಾರ್ಥಿಗಳು ಫೇಲ್ ಆಗಿದ್ದರು.ಈ ಸಂದರ್ಭದಲ್ಲಿ ಶಿಕ್ಷಣ ಕ್ಕೆ ಒತ್ತು ನೀಡುವಂತೆ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಫೇಲಾದವರ ಸಂಖ್ಯೆ 435 ಕ್ಕೆ ಇಳಿದಿದೆ ಎಂದರು
ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿ ಆಗಬೇಕು. ಈ ಕಾರಣದಿಂದಲೇ ಪ್ರಾಥಮಿಕ ಪ್ರೌಢ ಶಾಲೆ ಗಳಿಗೆ ಬೇಕಾದ ಮೂಲಭೂತ ವ್ಯವಸ್ಥೆಗಳು ನೀಡಲಾಗುವುದು. ಆರಂಭಿಕ ಹಂತದಲ್ಲಿ ಪ್ರೌಢ ಶಾಲೆ ಗಳಿಗೆ ಪೂರ್ಣ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಗೇರು ನಿಗಮದ ಅಧ್ಯಕ್ಷ ಮಮತಾ ಡಿಎಸ್ ಗಟ್ಟಿ ಮಾತನಾಡಿ, ಉಳ್ಳಾಲ ದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ಕೀರ್ತಿ ಸ್ಪೀಕರ್ ಗೆ ಸಲ್ಲುತ್ತದೆ.ಅವರು ಶೈಕ್ಷಣಿಕ ರಂಗಕ್ಕೆ ಪ್ರೋತ್ಸಾಹ ನೀಡುವ ಜೊತೆ ಅತ್ಯಂತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಪಿಎ ಕಾಲೇಜು ಪದವಿ ವಿಭಾಗದ ಪ್ರಾಂಶುಪಾಲ ಸರ್ಫರಾಝ್ ಹಾಸಿಂ, ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣ ಸಂಯೋಜಕ ವಿಶ್ವನಾಥ್ ಎಸ್ಸೆಸ್ಸೆಲ್ಸಿ ಫಲಿತಾಂಶ ದ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ.100 ಫಲಿತಾಂಶ ಪಡೆದ ಶಾಲೆಗಳನ್ನು ಗೌರವಿಸಲಾಯಿತು. ಸ್ಪೀಕರ್ ಯುಟಿ ಖಾದರ್ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಜಿಲ್ಲಾ ಉಪಾಧ್ಯಕ್ಷ ಸುರೇಖಾ ಚಂದ್ರ ಹಾಸ್, ಗೇರು ನಿಗಮದ ಅಧ್ಯಕ್ಷ ಮಮತಾ ಗಟ್ಟಿ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್,ಕಣಚೂರು ಮೋನು, ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರಾ, ಸುರೇಶ್ ಭಟ್ನಗರ , ಜಿ.ಪಂ.ಮಾಜಿ ಸದಸ್ಯ ಎನ್ ಎಸ್ ಕರೀಮ್, ಮನ್ಸೂರ್ ಮಂಚಿಲ ,ಕೆಎಮ್ ಕೆ ಮಂಜನಾಡಿ,ಜಗದೀಶ್ ಶೆಟ್ಟಿ, ಬಂಟ್ವಾಳ ಬಿಇಒ ಮಾಲತಿ, ಸಾಜಿದ್ ಉಳ್ಳಾಲ, ರಫೀಕ್ ಅಂಬ್ಲಮೊಗರು, ಸಲಾಮ್ ಉಚ್ಚಿಲ, ಮುಸ್ತಫಾ ಮಲಾರ್,ಮೊಹಮ್ಮದ್ ರಫೀಕ್,ಲಿಲ್ಲಿ ಫಾಯಿಸ್, ಶಶಿಕಲ, ರಝಾಕ್ ಇರಾ, ಜಬ್ಬಾರ್ ಬೋಳಿಯಾರ್ ರಝಿಯಾ ಇಬ್ರಾಹೀಮ್, ಮುರಳೀಧರ ಶೆಟ್ಟಿ, ಪುರುಷೋತ್ತಮ ಪಿಲಾರ್, ದಿನೇಶ್ ರೈ, ಯೂಸುಫ್ ಬಾವ ದೇರಳಕಟ್ಟೆ, ದೇವಕಿ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಸ್ವಾಗತಿಸಿದರು.
ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು