ದ.ಕ. ಜಿಲ್ಲೆಯಲ್ಲಿ ಸಡಗರದಿಂದ ನಡೆದ ಬಕ್ರೀದ್ ಹಬ್ಬದ ಆಚರಣೆ

ಮಂಗಳೂರು : ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ‘ಈದುಲ್ ಅಝ್ಹಾ’ (ಬಕ್ರೀದ್ ಹಬ್ಬ)ವನ್ನು ದ.ಕ. ಜಿಲ್ಲಾದ್ಯಂತ ಅತ್ಯಂತ ಸಡಗರ, ಸಂಭ್ರಮದಿಂದ ಇಂದು ಆಚರಿಸಲಾಯಿತು.

ನಗರದ ಬಾವುಟಗುಡ್ಡದ ಈದ್ಗಾ ಮಸ್ಟಿದ್ದಲ್ಲಿ ದ.ಕ.ಜಿಲ್ಲಾ ಖಾಝಿ ಅಲ್ಲಾಝ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನೇತೃತ್ವದಲ್ಲಿ ಖುತುಬಾ ಪಾರಾಯಣ ಮತ್ತು ಝೀನತ್ ಬಕ್ಸ್ ಮಸ್ಟಿದ್‌ನ ಖತೀಬ್ ಸೈಯದ್ ಶಂಶುದ್ದೀನ್ ಬಾಸಿತ್ ಬಾ ಅಲವಿ ತಂಜಳ್ ಅಲ್ ಅನ್ಸಾರಿ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಈ ಸಂದರ್ಭ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭೇಟಿ ನೀಡಿ ಶುಭ ಹಾರೈಸಿದರು. ಈದ್ಗಾ ಮತ್ತು ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞ, ಉಪಾಧ್ಯಕ್ಷ ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ, ಕೋಶಾಧಿಕಾರಿ ಎಸ್. ಎಂ. ರಶೀದ್ ಹಾಜಿ ಮತ್ತಿತರ ಪದಾಧಿಕಾರಿಗಳು, ಆಡಳಿತ ಕಮಿಟಿಯ ಸದಸ್ಯರು ಪಾಲ್ಗೊಂಡಿದ್ದರು.

ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು.

SHARE
Loading spinner

Leave a Reply

Your email address will not be published. Required fields are marked *

error: Content is protected !!