ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ

ಉಡುಪಿ: ಸುದ್ದಿಗೋಷ್ಠಿಯಲ್ಲಿ ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಮುಖಂಡರು, ನೂತನ ಮಂತ್ರಿಮಂಡಲದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಕುಂದಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ ಮಾತನಾಡಿ, ಮಂಜುನಾಥ ಭಂಡಾರಿ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುತ್ತಿದ್ದು, ಪಕ್ಷದ ಬೆಳವಣಿಗೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ರಾಜ್ಯದ ಎಲ್ಲ ಮಂತ್ರಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರಾಗಿದ್ದಾರೆ. ಹೀಗಾಗಿ ಅವರ ಸೇವೆಯನ್ನು ಗುರುತಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮಹಮ್ಮದ್ ಸಲಾಂ, ನಟರಾಜ್ ಹೊಳ್ಳ, ಅಭಿಜಿತ್ ಪೂಜಾರಿ, ಮುನಾಫ್ ಕೋಡಿ ಹಾಗೂ ರಕ್ಷಿತ್ ಶೆಟ್ಟಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!