ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಗರದಲ್ಲಿ ಇಲ್ಲದ ಕಾರಣ, ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸಿರುವುದಾಗಿ ಅವರು ಹೇಳಿದರು.

ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ರಾಜ್ಯಪಾಲರು ತಮ್ಮ ರಾಜೀನಾಮೆಯನ್ನು ಅಂಗೀಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಹೈಕಮಾಂಡ್ ಸೂಚಿಸಿದಾಗ ರಾಜೀನಾಮೆ ನೀಡುತ್ತೇನೆ ಎಂದು ನಾನು ಹಿಂದೆಯೇ ಹೇಳಿದ್ದೆ. ಎರಡು ದಿನಗಳ ಹಿಂದೆ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಅದರಂತೆ ಇಂದು ನಾನು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದ ಜನತೆಗೆ ಎರಡು ಬಾರಿ ಸೇವೆ ಸಲ್ಲಿಸುವ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು. ಜೊತೆಗೆ ಕಾಂಗ್ರೆಸ್ ನಾಯಕರುಗಳಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೃತಜ್ಞತೆ ಸಲ್ಲಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!