ಭೋವಿ ಅಭಿವೃದ್ಧಿ ನಿಗಮಕ್ಕೆ ಭೇಟಿ: ಸವಲತ್ತುಗಳ ಕುರಿತು ಮಾಹಿತಿ ಪಡೆದ ಪವನ್ ಕುಮಾರ್ ಶಿರ್ವ

ಬೆಂಗಳೂರು :ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ಭೇಟಿ ನೀಡಿದ ಭೋವಿ ಮುಖಂಡ ಪವನ್ ಕುಮಾರ್ ಶಿರ್ವ ಅವರು, ನಿಗಮದ ವಿವಿಧ ಯೋಜನೆಗಳು ಹಾಗೂ ಸವಲತ್ತುಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಮಾಹಿತಿ ಪಡೆದು ಸೂಕ್ತ ಚರ್ಚೆ ನಡೆಸಿದರು.

ಭೋವಿ ಸಮುದಾಯದ ಅಭಿವೃದ್ಧಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪವನ್ ಕುಮಾರ್ ಶಿರ್ವ, ನಿಗಮದ ಯೋಜನೆಗಳು ಮತ್ತು ಸೌಲಭ್ಯಗಳ ಮಾಹಿತಿ ಮುಂದಿನ ದಿನಗಳಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಭೋವಿ ಸಮುದಾಯದ ಜನರಿಗೆ ಹೆಚ್ಚಿನ ಉಪಯೋಗವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಅವರು ಕರೆ ನೀಡಿದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!