ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಿಐಟಿಯು ನೇತೃತ್ವದಲ್ಲಿ ಭಾರಿ ಹೋರಾಟ

ಉಡುಪಿ: ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್‌ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಮಣಿಪಾಲದಲ್ಲಿ ಸಾವಿರಾರು ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿದರು.


ಮಣಿಪಾಲದ ಟೈಗರ್ ಸರ್ಕಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಎಸಿ ಮೂಲಕ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಸಾವಿರಾರು ಕಾರ್ಮಿಕರಿಂದ ಸಂಗ್ರಹಿಸಲಾದ ಸಹಿಗಳ ಪ್ರತಿಯನ್ನೂ ಹಸ್ತಾಂತರಿಸಲಾಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.
ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧ‌ರ್ ಗೊಲ್ಲ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ವಿ, ಕೋಶಾಧಿಕಾರಿ ಕವಿರಾಜ್ ಎಸ್ ಕಾಂಚನ್ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಹಂಚು ಕಾರ್ಮಿಕ ಸಂಘ, ಕಟ್ಟಡ ಕಾರ್ಮಿಕ ಸಂಘ, ಅಂಗನವಾಡಿ ಸಂಘ ಹಾಗೂ ಬೀಡಿ ಫೆಡರೇಶನ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!