ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ: ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಮಂಗಳೂರು, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಪಕ್ಷದ ಜಯಘೋಷಗಳೊಂದಿಗೆ ಕಾರ್ಯಕರ್ತರು ಹೊಸ ಮುಖ್ಯಮಂತ್ರಿ ಅವರಿಗೆ ಶುಭಾಶಯ ಕೋರಿದರು.

ಸಂಭ್ರಮಾಚರಣೆಯಲ್ಲಿ ಮುಖಂಡರಾದ ಟಿ.ಕೆ. ಸುಧೀರ್, ಭರತೇಶ್ ಅಮೀನ್, ಜೀತೇಂದ್ರ ಜೆ. ಸುವರ್ಣ, ಯೋಗಿಶ್ ಕುಮಾರ್, ಉದಯ್ ಆಚಾರ್ಯ, ಹನೀಫ್ ಬಜಾಲ್, ವೆಲ್ವಿನ್, ವಿನೋದ್ ರಾಜ್ ಪಣಂಬೂರು, ಲಕ್ಷ್ಮಣ್ ಶೆಟ್ಟಿ, ಪ್ರಶಾಂತ್ ಅಮೀನ್ ಹಾಗೂ ಉದಯ್ ಕುಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!