‘ರೂಪಾಯಿಯ ಸಮಸ್ಯೆ’ ಕುರಿತು ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಉಪನ್ಯಾಸ

ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶ್ವವಿದ್ಯಾನಿಲಯ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ `ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.

ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮಕ್ಕೆ
ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಶಿವರುದ್ರಪ್ಪ ಎನ್.ಬಿ. ಚಾಲನೆ ನೀಡಿದರು.
ಬಳಿಕ‌ ಮಾತನಾಡಿದ ಅವರು ಅಂತಾರಾಷ್ಟಿçÃಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ಭಾರತದ ರೂಪಾಯಿ ಮËಲ್ಯ ಕುಸಿಯುತ್ತಿದ್ದು, ಇದೇ ಮಾದರಿ ಮುಂದುವರೆದರೆ, ಜನಸಾಮಾನ್ಯರಿಗೂ ಬಿಸಿ ತಟ್ಟಲಿದೆ. ದೇಶದ ಪರಿಸ್ಥಿತಿ ಹದಗೆಡಲಿದೆ ಎಂದು ಎಚ್ಚರಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ರಾಜು ಕೃಷ್ಣ ಚಲನ್ನವರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಜಯಂತ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ವಿಭಾಗದ ಹಣಕಾಸು ಅಕಾರಿ ಪ್ರೊ.ಪಂಚಲಿಂಗಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.ಡಾ.ಬೂಬಕರ್ ಸಿದ್ದೀಕ್,. ಡಾ.ವೇಂಕಟೇಶ್ ನಾಯಕ್ ಉಪಸ್ಥಿತರಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!