ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ಕೃಷಿ ಭವನದ ನೇತೃತ್ವದಲ್ಲಿ ಪರಿಸರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ ಜಿ.ಎಲ್.ಪಿ.ಎಸ್ ಹೊಸಬೆಟ್ಟು ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಬಶೀರ್ ಕನಿಲ ಅವರು ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಫಾತಿಮತ್ ಸುಹರಾ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯರಾದ ಶ್ರೀ ಮುಕ್ತಾರ್, ಶ್ರೀ ಇಲ್ಯಾಸ್ ಸೇರಿದಂತೆ ಗ್ರಾಮ ಪಂಚಾಯತ್ನ ಎಲ್ಲಾ ಎ.ಡಿ.ಸಿ ಸದಸ್ಯರು, ವಾರ್ಡ್ ಸದಸ್ಯರು, ಕೃಷಿ ಭವನದ ಅಧಿಕಾರಿಗಳು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರೆಲ್ಲರೂ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರುತ್ತಾ, ಸಸಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.


’ಹರಿತ ಕೇರಳ’ (ಹಸಿರು ಕೇರಳ) ಎಂಬ ಗುರಿಯತ್ತ ಪಂಚಾಯತ್ ಅನ್ನು ಮುನ್ನಡೆಸುವ ನಿಟ್ಟಿನಲ್ಲಿ, ಮುಂದಿನ ದಿನಗಳಲ್ಲಿ ಇಂತಹ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.


