ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾ ಪಂಚಾಯಿತಿ ಮೈಸೂರು , ತಾಲೂಕು ಪಂಚಾಯಿತಿ ಹುಣಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಮತ್ತು ಜಲ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ, ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ, ಮರಗಳ ನೆಡುವಿಕೆ, ನೀರಿನ ಸಂರಕ್ಷಣೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು ಹಾಗೂ ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸುವುದರ ಜೊತೆಗೆ ಗಿಡವನ್ನು ನೆಟ್ಟು ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ AEE ರಾಜೇಂದ್ರ ರವರು ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಶುದ್ಧ ಕುಡಿಯುವ ನೀರು ಮತ್ತು ಆರೋಗ್ಯಕರ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೀಲಾ ರವರು ಮುಂದಿನ ಪೀಳಿಗೆಗೆ ಶುದ್ಧ ಗಾಳಿ ನೀರು ಹಾಗೂ ಉತ್ತಮ ಪರಿಸರದಲ್ಲಿ ಇರಬೇಕಾದರೆ ನಾವೆಲ್ಲ ಈಗಲೇ ಜಾಗೃತರಾಗಿ ಪರಿಸರ ಸಂರಕ್ಷಣೆಗೆ ಪಣತೊಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ AEE ರಾಜೇಂದ್ರ , AE ಶಂಭುಲಿಂಗ ಗಂಗಣ್ಣನವರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೀಲಾ ಎ , ಕಾರ್ಯದರ್ಶಿ ಆನಂದ್ ಆರ್,ಭಗೀರಥ ಸಂಸ್ಥೆಯ ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ , ತಾಲೂಕು ಸಂಯೋಜಕರಾದ ಆನಂದ್ ಡಿ , ಕ್ಯಾಡ್ ಸ್ಟೇಷನ್ ಇಂಜಿನಿಯರ್ ಮೇಘರಾಜ್, ಅರೋಗ್ಯ ನೀರಿಕ್ಷಣ ಅಧಿಕಾರಿ ಹನುಮಂತು,ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!