ನಕಾರಾತ್ಮಕ ಚಿಂತನೆ ಬಿಟ್ಟು ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಬಿ.ಎ. ವಿವೇಕ ರೈ

ಉಡುಪಿ: ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ.


ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಕಲಾರಂಗದ ಐವೈಸಿ ಸಭಾಭವನದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಯುವಜನತೆ ಫೇಸ್‌ಬುಕ್‌ಗಳಂತಹ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುತ್ತ ಭ್ರಮಲೋಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಆ ಬದುಕಿನ ಭ್ರಮ ಲೋಕದಿಂದ ಯುವಜನತೆ ಹೊರ ಬಂದು, ಯಕ್ಷಗಾನದಂತಹ ಕಲೆಗಳ ಮೂಲಕ ಭ್ರಮಲೋಕವನ್ನು ಸೃಷ್ಠಿಮಾಡಬೇಕು. ಆ ಕಲೆ ನಮ್ಮನ್ನು ಕಾಪಾಡುತ್ತದೆ ಎಂದರು.


ಅಧ್ಯಕ್ಷತೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ವಹಿಸಿದ್ದರು. ಹಿರಿಯ ವಿದ್ವಾಂಸ ಡಾ.ಚಂದ್ರಶೇಖರ ದಾಮ್ಲೆ, ಹೊರನಾಡು ಶ್ರೀಅನ್ನಪೂರ್ಣೇಶ್ವರೀ ದೇವಸ್ಥಾನ ಧರ್ಮ ಕರ್ತೃ ಡಾ.ಜಿ. ಭೀಮೇಶ್ವರ ಜೋಶಿ, ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ ಇದ್ದರು.
ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಶಿಬಿರದ ನಿರ್ದೇಶಕ ಪವನ್ ಕಿರಣ್ಕೆರೆ ಅವರನ್ನು ಗೌರವಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ.ಹೆಗಡೆ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!