ಬಂಟ್ವಾಳದಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆಯಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿರವರು ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದರು. ಈ ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿರುತ್ತಾರೆ. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ ಎ,ಜುಬೈರ್, ಮುಹಮ್ಮದ್ ಸವಾದ್ ಹಾಗೂ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಎಂಬುದಾಗಿ ತಿಳಿಸಿದ್ದಾರೆ.

ಇವರು ಎಂಡಿಎಂಎ ಎಂಬ ಮಾದಕದ್ರವ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿದ್ದಾರೆ. ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಹಾಗೂ ಕಾರಿನಲ್ಲಿ ಅಂದಾಜು 7,64,000 ಮೌಲ್ಯದ ಒಟ್ಟು 76 ಗ್ರಾಂ 40 ಮಿಲಿಗ್ರಾಂ ಎಂ.ಡಿ.ಎಂ.ಎ ಮಾದಕದ್ರವ್ಯ ಹಾಗೂ ಮಾದಕ ವಸ್ತು ಸೇವನೆ ಮಾಡಲು ಉಪಯೋಗಿಸುವ ಸಾಧನ ಪತ್ತೆಯಾಗಿದೆ. ಈ ಸೊತ್ತುಗಳನ್ನು, ಆರೋಪಿಗಳ ಬಳಿಯಿದ್ದ 3 ಮೊಬೈಲ್ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!