ಸುಂಕದಕಟ್ಟೆ, ಜೂನ್ 8: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮ್ಮೇಳನವು ಸುಂಕದಕಟ್ಟೆಯ ಬಿಜೆಪಿ ಕಾರ್ಯಾಲಯದಲ್ಲಿ ಯಶಸ್ವಿಯಾಗಿ ನಡೆಯಿತು.
ಸಮಿತಿ ಅಧ್ಯಕ್ಷೆ ವನಿತಾ ಜೆ. ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ಯಶವಂತಿ ಬೆಜ್ಜ, ಪಂಚಾಯತ್ ಸದಸ್ಯರಾದ ಚಂದ್ರಶೇಖರ ವರ್ಕಾಡಿ, ತುಳಸಿ ವರ್ಕಾಡಿ ಹಾಗೂ ರವಿ ಎಂ.ಕೆ. ಕೊಲ್ಯೂರು ಶುಭಾಶಯಗಳನ್ನು ತಿಳಿಸಿ ಮಾತನಾಡಿದರು.
ಸಮ್ಮೇಳನದ ಸಮಾರೋಪ ಭಾಷಣವನ್ನು ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ಹರೀಶ್ ಕುದ್ರೆಪ್ಪಾಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ನೂತನ ಪಂಚಾಯತ್ ಸಮಿತಿಯನ್ನು ರಚಿಸಲಾಯಿತು.
ನೂತನ ಸಮಿತಿಯ ಅಧ್ಯಕ್ಷರಾಗಿ ಸುನಿಲ್ ಬಟ್ಟೆಕಲ್ಲು, ಉಪಾಧ್ಯಕ್ಷರಾಗಿ ಉಮೇಶ್ ಮಂಟಮೆ, ಶ್ರೀಧರ ತಿಮ್ಮಂಗರಾನೆ ಹಾಗೂ ಉಮೇಶ್ ಅರಿಂಗುಳ ಆಯ್ಕೆಯಾದರು. ಕಾರ್ಯದರ್ಶಿಯಾಗಿ ರವೀಂದ್ರ ಕುಲಾಲ್, ಜಂಟಿ ಕಾರ್ಯದರ್ಶಿಗಳಾಗಿ ಗೋಪಾಲ ದೈಗೋಳಿ, ಗಿರೀಶ್ ಪಾವಳ ಮತ್ತು ಚಿದಾನಂದ ಆಯ್ಕೆಯಾದರು. ಕೋಶಾಧಿಕಾರಿಯಾಗಿ ವನಿತಾ ಜೆ. ನಾಯಕ್ ಅವರನ್ನು ಆಯ್ಕೆ ಮಾಡಲಾಗಿದ್ದು, ಇತರ ಸಮಿತಿ ಸದಸ್ಯರನ್ನೂ ನೇಮಕಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ರವೀಂದ್ರ ಕುಲಾಲ್ ಸ್ವಾಗತಿಸಿ, ನೂತನ ಅಧ್ಯಕ್ಷ ಸುನಿಲ್ ಬಟ್ಟೆಕಲ್ಲು ವಂದನಾರ್ಪಣೆ ಸಲ್ಲಿಸಿದರು.
ಸಮ್ಮೇಳನದಲ್ಲಿ ಕಾರ್ಮಿಕರ ಹಿತಾಸಕ್ತಿ, ಸಂಘಟನೆಯ ಬಲವರ್ಧನೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯ ಕುರಿತು ಚರ್ಚೆ ನಡೆಯಿತು.