ಸೀಮಂತ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದ ಮಿನಿ ಬಸ್ ಪಲ್ಟಿ; ಗಾಯಾಳುಗಳಲ್ಲಿ ಓರ್ವ ಸಾವು

ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಾಸು ಮನೆಗೆ ಹೋಗುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ನಡೆದಿದೆ.


ಮಂಗಳೂರು ಮೂಲದ ವಿಕಾಶ್ ಎಂಬಾತ ಮೃತಪಟ್ಟಿದ್ದು ಉಳಿದ ಸುಮಾರು 9 ಮಂದಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಎಂಬಲ್ಲಿಗೆ ಸೀಮಂತ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ಬಂದವರು ವಾಪಸು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಸುಮಾರು 4 ಗಂಟೆಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಟ್ವಾಳದ ಪುದು ಗ್ರಾಮದ 10 ನೇ ಮೈಲಿಗಲ್ಲು ತಲುಪಿದಾಗ ಚಾಲಕನ ನಿಯಂತ್ರಣ ಕಳೆದು ಡಿವೈಡರ್ ಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿಯಾಗಿದೆ.
ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ ಸುಮಾರು 9 ಮಂದಿಗೆ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದು ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಕಾಶ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!