ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಾಮೆಂಟ್; ವ್ಯಕ್ತಿ ಬಂಧನಜಾತಿನಿಂದನೆ, ಜೀವ ಬೆದರಿಕೆ ಆರೋಪದಡಿ ಕಾರ್ಕಳ ಪೊಲೀಸರ ಕ್ರಮ

ಉಡುಪಿ, ಜೂ. 8: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಜಾತಿನಿಂದನಾತ್ಮಕ ಕಾಮೆಂಟ್ ಮಾಡಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಕಾರ್ಕಳ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಕಾರ್ಕಳ ತಾಲೂಕಿನ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

‘ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಪ್ರಕಟಗೊಂಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತ ಪೋಸ್ಟ್‌ಗೆ ಸುಧೀರ ಬಂಗೇರ ಅವಹೇಳನಕಾರಿ, ಜಾತಿನಿಂದನಾತ್ಮಕ ಪದಗಳನ್ನು ಬಳಸಿ ಕಾಮೆಂಟ್ ಮಾಡಿರುವುದಲ್ಲದೆ ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ.

ಈ ಕುರಿತು ಕಾರ್ಕಳ ನಿಟ್ಟೆ ಅತ್ತೂರು ನಿವಾಸಿ ಸುರೇಶ್ ಚೇತನಹಳ್ಳಿ ನೀಡಿದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಾಮಾಜಿಕ ಶಾಂತಿ ಹಾಗೂ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣವನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!