ವೆನ್‌ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಸೂಚನೆ

ಮಂಗಳೂರು, ಜೂನ್ 8: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಆಸ್ಪತ್ರೆ ಆಡಳಿತ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಇಂಟರ್ನ್‌ಗಳಿಗೆ ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಸ್ಪತ್ರೆಗೆ ಆಗಮಿಸುವ ಬಹುತೇಕ ರೋಗಿಗಳು ಕನ್ನಡ ಭಾಷಿಕರಾಗಿದ್ದು, ಇತರ ಭಾಷೆಗಳ ಅರಿವು ಇಲ್ಲದ ಕಾರಣ ಕೆಲ ವೈದ್ಯರು ಹಾಗೂ ವಿದ್ಯಾರ್ಥಿಗಳು ಕನ್ನಡದಲ್ಲಿ ಸಂವಹನ ನಡೆಸದಿರುವುದರಿಂದ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿವೆ.

ಅಲ್ಲದೆ, ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಆರೋಗ್ಯದ ಪ್ರಗತಿ ಕುರಿತು ವೈದ್ಯರು ಮತ್ತು ವಿದ್ಯಾರ್ಥಿಗಳು ಸಮರ್ಪಕ ಮಾಹಿತಿ ನೀಡದಿರುವ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ದೂರುಗಳು ವ್ಯಕ್ತವಾಗಿವೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ರೋಗಿಗಳೊಂದಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ವ್ಯವಹರಿಸುವಂತೆ ಸೂಚಿಸಲಾಗಿದ್ದು, ಹೊರರಾಜ್ಯದಿಂದ ಬರುವ ವೈದ್ಯಕೀಯ ವಿದ್ಯಾರ್ಥಿಗಳು ಮೂರು ತಿಂಗಳೊಳಗೆ ಕನ್ನಡ ಕಲಿಯಬೇಕು ಎಂದು ನಿರ್ದೇಶಿಸಲಾಗಿದೆ. ಅಲ್ಲಿಯವರೆಗೆ ರೋಗಿಗಳೊಂದಿಗೆ ಸಂವಹನ ನಡೆಸಲು ವಿಭಾಗಗಳಲ್ಲಿರುವ ಇತರೆ ಸಿಬ್ಬಂದಿಯ ಸಹಾಯ ಪಡೆಯುವಂತೆ ವೆನ್‌ಲಾಕ್ ಆಸ್ಪತ್ರೆಯ ಅಧೀಕ್ಷಕರು ಆದೇಶಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!