ಮಂಗಳೂರು,: ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆ
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ನಿಝಾಮ್ ಅವರ ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿರುವುದು ಪಕ್ಷದ ಶಿಸ್ತು ಹಾಗೂ ಗೌರವಕ್ಕೆ ಧಕ್ಕೆ ಉಂಟುಮಾಡಿರುವುದು ಗಮನಕ್ಕೆ ಬಂದಿದೆ ಎಂದು ಹೇಳಲಾಗಿದೆ.
ಪಕ್ಷದ ಹಿತಾಸಕ್ತಿ, ಶಿಸ್ತು ಮತ್ತು ಸಂಘಟನೆಯ ಮೌಲ್ಯಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ಸಿದ್ಧಾಂತ, ಮೌಲ್ಯಗಳು ಹಾಗೂ ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.