ಮಂಗಳೂರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ವತಿಯಿಂದ ಜುಲೈ 1ರಿಂದ ಆರಂಭವಾಗಲಿರುವ ಆರು ತಿಂಗಳ ಅವಧಿಯ ರೆಗ್ಯುಲರ್ ಹಾಗೂ ದೂರಶಿಕ್ಷಣದ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ಕೋರ್ಸ್‌ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ವಿವಿಧ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳು ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಜೂನ್ 30 ಕೊನೆಯ ದಿನವಾಗಿದ್ದು, ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಆಗಿದೆ. ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ 600 ರೂ. ಹಾಗೂ ಇತರ ಅಭ್ಯರ್ಥಿಗಳಿಗೆ 500 ರೂ. ಶಿಷ್ಯವೇತನ ನೀಡಲಾಗುತ್ತದೆ.
ಕೋರ್ಸ್‌ನಲ್ಲಿ ಸಹಕಾರ ತತ್ವಗಳು, ಸಹಕಾರ ಹಣಕಾಸು ಮತ್ತು ಬ್ಯಾಂಕಿಂಗ್, ಸಹಕಾರ ಸಂಘಗಳ ನಿರ್ವಹಣೆ, ಸಹಕಾರ ಸಂಘಗಳ ಕಾಯ್ದೆಯ ಅಂಶಗಳು, ಸಹಕಾರ ಲೆಕ್ಕಪತ್ರ ಹಾಗೂ ಲೆಕ್ಕಪರಿಶೋಧನೆ ಮತ್ತು ಕಂಪ್ಯೂಟರ್ ಕಾರ್ಯಾಚರಣೆ ಕುರಿತ ಪಠ್ಯಕ್ರಮ ಒಳಗೊಂಡಿದೆ.
ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಸೇರಿದಂತೆ ವಿವಿಧ ಸಹಕಾರ ಸಂಘಗಳು ಹಾಗೂ ಬ್ಯಾಂಕ್‌ಗಳ ನೇಮಕಾತಿಯಲ್ಲಿ ಸಹಕಾರ ಕಾಯ್ದೆ ಮತ್ತು ನಿಯಮಾವಳಿಗಳ ಪ್ರಕಾರ ಆದ್ಯತೆ ನೀಡಲಾಗುತ್ತದೆ.
ಈ ಪಠ್ಯಕ್ರಮವು ಕೆಎಎಸ್ ಪರೀಕ್ಷೆಯ ಸಹಕಾರ ಮತ್ತು ಗ್ರಾಮೀಣಾಭಿವೃದ್ಧಿ ವಿಷಯ, ಸಹಕಾರ ಇಲಾಖೆಯ ಕೋ-ಆಪರೇಟಿವ್ ಇನ್‌ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಸಹಕಾರ ಸಂಸ್ಥೆಗಳ ನೇಮಕಾತಿ ಪರೀಕ್ಷೆಗಳಿಗೆ ಪೂರಕವಾಗಲಿದೆ.
ಸಹಕಾರ ಕಾಯ್ದೆ ಹಾಗೂ ನಿಯಮಾವಳಿಗಳ ಪ್ರಕಾರ ಸಹಕಾರ ಸಂಘಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಡಿಸಿಎಂ ಕೋರ್ಸ್ ಕಡ್ಡಾಯವಾಗಿದ್ದು, ಖಾಯಂ ಸಿಬ್ಬಂದಿಗಳಿಗೆ ದೂರಶಿಕ್ಷಣದ ಮೂಲಕ ಪ್ರವೇಶಾವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 08258-236561 ದೂರವಾಣಿ ಸಂಖ್ಯೆ ಅಥವಾ 7022429440, 8971361396 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.