ಮಾಣಿ ಸಮೀಪ ಭೀಕರ ರಸ್ತೆ ಅಪಘಾತ: ಕಾರು ಪಲ್ಟಿಯಾಗಿ ಚಾಲಕ ಸಾವು, ಮೂವರಿಗೆ ಗಂಭೀರ ಗಾಯ

ಮಾಣಿ, ಜೂ.10: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮೂವರು ಸಹಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಅಪಘಾತದಲ್ಲಿ ಹಾಸನ ಮೂಲದ ಲಕ್ಷ್ಮೀಕಾಂತ್ ಮೃತಪಟ್ಟ ದುರ್ದೈವಿ ಚಾಲಕ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಂಜಿತ್, ದರ್ಶನ್ ಹಾಗೂ ಶೋಭಾ ಗಂಭೀರ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆಯ ಕುರಿತು ಸಂಬಂಧಿಸಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!