ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು, ಜೂ.11: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉಪ್ಪಳ ಪಚ್ಚಿಲಾಂಬರ್ ನಿವಾಸಿ ಫಝಲ್ (31) ಬಂಧಿತ ಆರೋಪಿ. ಈತ ಉಳ್ಳಾಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 76/2021ರ ಅಡಿಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಹಾಗೂ 21(ಬಿ) ಪ್ರಕರಣದ ಆರೋಪಿಯಾಗಿದ್ದನು.

2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಫಝಲ್ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಉಪ್ಪಳದಲ್ಲಿರುವ ಆತನ ನಿವಾಸದಿಂದ ಪೊಲೀಸರು ಬಂಧಿಸಿ ಮಂಗಳೂರಿನ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ವಿಶೇಷ ಪ್ರಕರಣ ಸಂಖ್ಯೆ 23/2026ರಡಿ ಹಾಜರುಪಡಿಸಿದರು.

ಆರೋಪಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!