ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಅನಿತಾ ಕಾಸರಗೋಡು ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟ್ಸ್ ಸಮುದಾಯಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ ಆರೋಪದಡಿ ಅನಿತಾ ಕಾಸರಗೋಡು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ಸಲ್ಲಿಸಿದ್ದವು.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್‌ಗಳ ಪರಿಶೀಲನೆ, ತಾಂತ್ರಿಕ ಮಾಹಿತಿ ಸಂಗ್ರಹ ಸೇರಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!