ಕೆಂಗೇರಿಯಲ್ಲಿ ಭೀಕರ ರಸ್ತೆ ಅಪಘಾತ: ಕೇರಳದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ದುರ್ಮರಣ

ಬೆಂಗಳೂರು: ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮೃತರನ್ನು ಬಿಜಿಎಸ್ ಕಾಲೇಜಿನ ನಾಲ್ಕನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಸಿ.ಬಿ. ಹಾಗೂ ಗೌರಿ ಶಂಕರ್ ಎಂದು ಗುರುತಿಸಲಾಗಿದೆ.

ಶನಿವಾರ ಬೆಳಗಿನ ಜಾವ ಸುಮಾರು 2 ಗಂಟೆ ವೇಳೆಗೆ ಕೆಂಗೇರಿಯ ಆರ್.ಆರ್. ದಂತ ಕಾಲೇಜು ಸಮೀಪ ಈ ದುರ್ಘಟನೆ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಪರೀಕ್ಷೆಯ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು.

ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!