ಬೇಕಲ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

​ಕಾಸರಗೋಡು: ಬೇಕಲ ಕೋಟೆ ಸಮೀಪದ ಪಳ್ಳಿಕರೆ ಬೀಚ್‌ನಲ್ಲಿ ಭಾನುವಾರ ಸಂಜೆ ನಡೆದ ದುರ್ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾಗಿದ್ದಾರೆ. ಕೊಟ್ಟಾಯಂ ಚಂಗನಾಶೇರಿಯ ನಿವಾಸಿಗಳಾದ ಅಂಗಿತ್ (20) ಮತ್ತು ಅಪ್ಪು ಟಿ. ಎಬ್ರಹಾಂ (20) ಕಾಣೆಯಾದ ವಿದ್ಯಾರ್ಥಿಗಳು.

​ಘಟನೆ ನಡೆದಾಗ ನಾಲ್ವರು ವಿದ್ಯಾರ್ಥಿಗಳ ತಂಡ ಸಮುದ್ರದಲ್ಲಿ ಈಜಲು ಇಳಿದಿತ್ತು. ಈ ವೇಳೆ ಬಲವಾದ ಅಲೆಗಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಉಳಿದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಜೆ ಸುಮಾರು 6:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ವಿಷಯ ತಿಳಿದ ತಕ್ಷಣವೇ ಸ್ಥಳೀಯರು ಮತ್ತು ಬೇಕಲ ಪೊಲೀಸರು ಧಾವಿಸಿ ಬಂದು ಸಮುದ್ರದಲ್ಲಿ ವ್ಯಾಪಕ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.

ವಿದ್ಯಾರ್ಥಿಗಳ ಪತ್ತೆಯಾಗಿ ಶೋಧನೆ ಮುಂದುವರಿದಿದೆ. ಈ ಘಟನೆಯು ಪ್ರವಾಸಿಗರ ಭದ್ರತೆಯ ಕುರಿತು ಮತ್ತೊಮ್ಮೆ ಆತಂಕವನ್ನು ಹುಟ್ಟುಹಾಕಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!