ಕಾಸರಗೋಡು: ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಸಾರಥ್ಯದ ಕನ್ನಡ ಭವನ ನೀಡುವ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಗೆ ಆಯ್ಕೆಯಾಗಿದ್ದಾರೆ.
ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಜುಲೈ 26, 2026ರಂದು ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026” ಹಾಗೂ ಕನ್ನಡ ಭವನ ರಜತ ಸಂಭ್ರಮ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಈ ವಿಷಯವನ್ನು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.