ಪುತ್ತೂರು,: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಪುತ್ತೂರು ಘಟಕದ ಆಜೀವ ಸದಸ್ಯರು ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕೆ.ಸಿ. ಪಾಟಾಳಿ ಪಡುಮಲೆ (78) ಅವರು ಬುಧವಾರ ಮುಂಜಾನೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಶೈಕ್ಷಣಿಕ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಅವರು, ತಮ್ಮ ವೃತ್ತಿಜೀವನವನ್ನು ಸುಳ್ಯ ಪದವು ಅನುದಾನಿತ ಶಾಲೆಯಲ್ಲಿ ಆರಂಭಿಸಿದ್ದರು. ಬಳಿಕ ಈಶ್ವರಮಂಗಲ ಶಾಲೆಗೆ ವರ್ಗಾವಣೆಗೊಂಡು ಸಹ ಶಿಕ್ಷಕರಾಗಿ ಹಾಗೂ ನಂತರ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸಿ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು.
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಮಗಳ ಮನೆಯಲ್ಲಿ ವಾಸವಿದ್ದು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಅಪಾರ ಬಂಧು-ಬಳಗ ಹಾಗೂ ಶಿಷ್ಯವರ್ಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಪಡುಮಲೆಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.