ಮೂಡುಬಿದಿರೆ: ತಾಲೂಕಿನ ಪಡುಮಾರ್ನಾಡು ಗ್ರಾಮದ ಅಮನಬೆಟ್ಟು ಯುವಕ ಮಂಡಲದಲ್ಲಿ ಯುವಕ-ಯುವತಿ ಮಂಡಲದ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಸಂಬಂಧಿತ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ ಹಾಗೂ ಪತ್ರಕರ್ತ Rai Rajkumar ಮಾತನಾಡಿ, ಶಿಕ್ಷಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ಸೃಜನಶೀಲ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು.
ಶಿಸ್ತು, ಸಂಯಮ, ಸರಳ ಜೀವನ ಮತ್ತು ಉನ್ನತ ಜ್ಞಾನದೊಂದಿಗೆ ಯೋಜಿತವಾಗಿ ಕಾರ್ಯನಿರ್ವಹಿಸಿದರೆ ಪ್ರತಿಯೊಬ್ಬರೂ ಜೀವನದಲ್ಲಿ ಸಾಧನೆ ಮಾಡಿ ಬೆಳಗಬಹುದು ಎಂದು ಅವರು ವಿವಿಧ ಉದಾಹರಣೆಗಳ ಮೂಲಕ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಹೇಮಲತಾ ವಹಿಸಿದ್ದರು. ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಸುರೇಂದ್ರ ಪೂಜಾರಿ, ಶಿಕ್ಷಕಿ ಸುನಿತಾ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಧರ್ಮಸ್ಥಳ ಜ್ಞಾನ ವಿಕಾಸ ಯೋಜನೆಯ ಅಧಿಕಾರಿ ವಿನುತ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಉಶಾಕಿರಣ್ ಕಾರ್ಯಕ್ರಮ ನಿರೂಪಿಸಿದರು. ಯೋಜನಾ ಸಂಯೋಜಕಿ ವಸಂತಿ ವಂದಿಸಿದರು.