ವಿಟ್ಲದಲ್ಲಿ ದಾರುಣ ಘಟನೆ: ಲಾರಿ ದುರಸ್ತಿ ಮಾಡುವಾಗ ಚಕ್ರದ ಅಡಿಗೆ ಸಿಲುಕಿ ಚಾಲಕ ಸಾವು

​ ಮಂಜೇಶ್ವರ : ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಟಿಪ್ಪರ್ ಲಾರಿ ಚಾಲಕನೊಬ್ಬ ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.

ಅಕ್ರಮ ಬಾಕ್ಸೈಟ್ ಸಾಗಣೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಲಾರಿಯನ್ನು ಸರಿಪಡಿಸಲು ಮಹೇಶ್ ಅವರು ವಾಹನದ ಕೆಳಗೆ ಹೋಗಿ ಕೆಲಸ ಮಾಡುತ್ತಿದ್ದಾಗ, ಅನಿರೀಕ್ಷಿತವಾಗಿ ಲಾರಿ ಮುಂದಕ್ಕೆ ಚಲಿಸಿದೆ. ಪರಿಣಾಮ ಚಾಲಕ ಲಾರಿಯ ಚಕ್ರಗಳ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಘಟನೆ ನಡೆದ ತಕ್ಷಣ ಸ್ಥಳದಲ್ಲಿದ್ದ ಕಾರ್ಮಿಕರು ಮತ್ತು ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಕೂಡಲೇ ಕಾರ್ಯಾಚರಣೆ ನಡೆಸಿ, ಲಾರಿಯ ಅಡಿಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!