ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ ಪ್ರತಿನಿಧಿಗಳ 10ನೇ ಮಹಾಮೇಳ, ಕಾಸರಗೋಡಿನಿಂದ ಸೋಲಾಪುರಕ್ಕೆ ಕನ್ನಡ ಯಾತ್ರೆ

ಕೇರಳ ರಾಜ್ಯದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಪರಂಪರೆಯನ್ನು ರಾಜ್ಯ ಅಂತರ ರಾಜ್ಯದಾದ್ಯಂತ ದೇಶ ವಿದೇಶಗಳಲ್ಲಿ ಪ್ರಚಾರ ಪಡಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ 1990 ರಲ್ಲಿ ಸ್ಥಾಪನೆಗೊಂಡಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕಾಸರಗೋಡು ಇದರ ಆಶ್ರಯದಲ್ಲಿ ಸಾಂಸ್ಕೃತಿಕ ವಿನಿಮಯಕ್ಕಾಗಿ ಐತಿಹಾಸಿಕ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ -ಕರ್ನಾಟಕ ಉತ್ಸವ, ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7 ಮತ್ತು 8ರಂದು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ”ಕೇರಳ- ಕರ್ನಾಟಕ ಭವನ” ಸಾಂಸ್ಕೃತಿಕ ಸಮುಚ್ಚಯದ ಶಿಲಾನ್ಯಾಸವನ್ನು ಏರ್ಪಡಿಸಲಾಗಿದೆ. ಇದರ ಪೂರ್ವಭಾವಿಯಾಗಿ ದೇಶ ವಿದೇಶಗಳಲ್ಲಿ ಕನ್ನಡ ಯಾತ್ರೆಯ ಮೂಲಕ ಪ್ರಚಾರ ಪಡಿಸಲು ಉದ್ದೇಶಿಸಲಾಗಿದೆ.

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕಾಸರಗೋಡು ಇದರ ನೇತೃತ್ವದಲ್ಲಿ ಕಾಸರಗೋಡಿನ ವಿವಿಧ ಕನ್ನಡ ಸಂಘಟನೆಗಳ ಪ್ರತಿನಿಧಿಗಳನ್ನೊಳಗೊಂಡ ಸಾಂಸ್ಕೃತಿಕ ನಿಯೋಗವು, ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಗುರಪ್ಪ ಬೆಲ್ಲದ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರದ ಸೋಲಾಪುರದ ಹುತಾತ್ಮ ಸ್ಮೃತಿ ಮಂದಿರದಲ್ಲಿ 2026 ಜೂನ್ 20 ಮತ್ತು 21ರಂದು ಎರಡು ದಿನಗಳ ಕಾಲ ನಡೆಯುವ ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ ಪ್ರತಿನಿಧಿಗಳ 10 ನೇ ಮಹಾಮೇಳಕ್ಕೆ ಕಾಸರಗೋಡಿನಿಂದ ಸೋಲಾಪುರಕ್ಕೆ ಕನ್ನಡ ಯಾತ್ರೆಯನ್ನು ಕೊಂಡೊಯ್ಯಲಾಗಿದೆ.


ಕಾಸರಗೋಡಿನ ವಿವಿಧ ಕನ್ನಡ ಸಂಘಟನೆಗಳ ಪ್ರತಿನಿಧಿಗಳನ್ನೊಳಗೊಂಡ ಸಾಂಸ್ಕೃತಿಕ ನಿಯೋಗದಲ್ಲಿ ಶಿವರಾಮ ಕಾಸರಗೋಡು,ಕೆ. ಜಗದೀಶ ಕೂಡ್ಲು,ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕೆ. ಗುರುಪ್ರಸಾದ ಕೋಟೆಕಣಿ, ದಿವಾಕರ ಪಿ ಅಶೋಕನಗರ, ಶ್ರೀಕಾಂತ ಕಾಸರಗೋಡು, ಕಿರಣ್ ಕಲಾಂಜಲಿ, ಕುಶಲಕುಮಾರ್ ಕೆ. ಹಾಜಿ ಎಸ್ ಅಬೂಬಕ್ಕರ್ ಆರ್ಲಪದವು, ಸಾಗರ್ ಕಾಸರಗೋಡು ಭಾಗವಹಿಸಲಿದ್ದಾರೆ.
ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ ಇದರ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕಾಸರಗೋಡಿನ ಬೇಳ ಶೋಕ ಮಾತಾ ದೇವಾಲಯದಲ್ಲಿ 2008 ರಲ್ಲಿ ಕೇರಳ ರಾಜ್ಯ 3 ನೇ ಕನ್ನಡ ಸಮ್ಮೇಳನ-2008 ಮತ್ತು ಕೇರಳ- ಕರ್ನಾಟಕ ಉತ್ಸವವನ್ನು ಹಮ್ಮಿಕೊಂಡಿರುವುದನ್ನು ಸ್ಮರಿಸಬಹುದು.

SHARE
Loading spinner

Leave a Reply

Your email address will not be published. Required fields are marked *

error: Content is protected !!