ಸಚಿವ ಯು.ಟಿ. ಖಾದರ್ ಅವರಿಗೆ ‘ರಾಜಕಾರಣದ ಅನರ್ಘ ರತ್ನ’ ಗೌರವ ಬಿರುದು

ಮಂಗಳೂರು: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317D ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ. ಖಾದರ್ ಅವರಿಗೆ ‘ರಾಜಕಾರಣದ ಅನರ್ಘ ರತ್ನ’ ಗೌರವ ಬಿರುದು ನೀಡಿ ಸನ್ಮಾನಿಸಲಾಯಿತು.

ಜಿಲ್ಲೆಯ ಸಮಸ್ತ ಲಯನ್ಸ್ ಸದಸ್ಯರ ಪರವಾಗಿ ನಡೆದ ಈ ಗೌರವ ಸಮಾರಂಭದಲ್ಲಿ ಜಿಲ್ಲಾ ರಾಜ್ಯಪಾಲ ಕುಡ್ಪಿ ಅರವಿಂದ್ ಶೆಣೈ ಅಧ್ಯಕ್ಷತೆ ವಹಿಸಿ ಸಚಿವ ಯು.ಟಿ. ಖಾದರ್ ಅವರನ್ನು ಸನ್ಮಾನಿಸಿದರು. ಸಮಾಜಮುಖಿ ಸೇವೆ ಹಾಗೂ ಜನಪರ ಆಡಳಿತದ ಮೂಲಕ ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಗೌರವ ಪ್ರದಾನ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ರಾಜ್ಯಪಾಲ ದೇವದಾಸ್ ಬಂಡಾರಿ, ಜಿಲ್ಲಾ ಸಂಪುಟ ಕಾರ್ಯದರ್ಶಿ ಎಚ್.ಆರ್. ಚಂದ್ರೇಗೌಡ, ಜಿಲ್ಲಾ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ಜಿಲ್ಲಾ ಸಂಪರ್ಕ ಅಧಿಕಾರಿ ಸುದರ್ಶನ್ ಪಡಿಯಾರ್ ವಿಟ್ಲ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ ಸೇರಿದಂತೆ ಜಿಲ್ಲಾ ಸಂಪುಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರಥಮ ಉಪ ರಾಜ್ಯಪಾಲ ಗೋವರ್ಧನ್ ಶೆಟ್ಟಿ ಹಾಗೂ ದ್ವಿತೀಯ ಉಪ ರಾಜ್ಯಪಾಲ ವೆಂಕಟೇಶ್ ಹೆಬ್ಬಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಲಯನ್ಸ್ ಕ್ಲಬ್ ಮಂಗಳಗಂಗೋತ್ರಿಯ ಅಧ್ಯಕ್ಷ ಶರತ್ ರಾಜ್ ಶೆಟ್ಟಿ ಸ್ವಾಗತಿಸಿದರು. ಮಂಗಳಗಂಗೋತ್ರಿ ಕ್ಲಬ್‌ನ ಸದಸ್ಯರು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಲಯನ್ಸ್ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!