ಮಂಗಳೂರು,:2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಘಟಕ ಕಾಲೇಜುಗಳಲ್ಲಿ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ, ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ, ಮೂಡಬಿದಿರೆ ಕಾಲೇಜುಗಳ ಪದವಿ ಕಾರ್ಯಕ್ರಮಗಳಿಗೆ ನೇಮಕಾತಿ ನಡೆಯಲಿದೆ.
ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಮೈಕ್ರೋಬಯಾಲಜಿ, ಕಂಪ್ಯೂಟರ್ ಸೈನ್ಸ್/ಬಿಸಿಎ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ವಾಣಿಜ್ಯ ಮತ್ತು ನಿರ್ವಹಣೆ, ದೈಹಿಕ ಶಿಕ್ಷಣ, ಪತ್ರಿಕೋದ್ಯಮ ಹಾಗೂ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ವಿಷಯಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಅಂಕಗಳ ಅರ್ಹತೆ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.