ಜಮ್ಮು-ಕಾಶ್ಮೀರದಲ್ಲಿ LET ಟಾಪ್ ಕಮಾಂಡರ್​ ಹತ್ಯೆ: ಬಂಡಿಪೋರಾ ಎನ್ ಕೌಂಟರ್ ನಲ್ಲಿ ಅಲ್ತಾಫ್ ಲಲ್ಲಿ ಫಿನಿಶ್

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಸಿಕ್ಕ ಮೇರೆಗೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟ ಹಿನ್ನೆಲೆಯಲ್ಲಿ, ಉಗ್ರರನ್ನು ಸೆದೆಬಡಿಯುವ ಕೆಲಸದಲ್ಲಿ ಭಾರತೀಯ ಸೇನೆ ನಿರತವಾಗಿದೆ. ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ಬೆಳಗ್ಗೆ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹೊಡೆದುರುಳಿಸಲಾಗಿದೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಸಿಕ್ಕ ಮೇರೆಗೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ವೇಳೆ ಭಯೋತ್ಪಾದಕರು ಇರುವ ಜಾಗವನ್ನು ಪತ್ತೆಹಚ್ಚಲಾಯಿತು. ಬಳಿಕ ಗುಂಡಿನ ಚಕಮಕಿ ನಡೆದು, ಎಲ್​ಇಟಿ ಕಮಾಂಡರ್​ನ್ನು ಹೊಡೆದುರುಳಿಸಲಾಯಿತು.

ಇದೇ ವೇಳೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಶ್ರೀನಗರಕ್ಕೆ ಆಗಮಿಸಿದ್ದಾರೆ. ಬಂಡಿಪೋರಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪರಿಸ್ಥಿತಿಯ ಸಮಗ್ರ ಭದ್ರತಾ ಪರಿಶೀಲನೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!