ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕನ ದಾರುಣ ಸಾವು

ಮಂಜೇಶ್ವರ: ಕುಂಬಳೆ ನಾಯ್ಕಾಪು ಮುಜಂಗಾವು ಎಂಬಲ್ಲಿ ಶುಕ್ರವಾರ ಸಂಜೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಿಂದ ಆಯತಪ್ಪಿ ಬಿದ್ದು ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಬೇಳ ನಿವಾಸಿ ಫ್ರಾನ್ಸಿಸ್ ಡಿಸೋಜ (47) ಸಾವನ್ನಪ್ಪಿದ ದುರ್ದೈವಿ.
​ಮನೆ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದಾಗ ಫ್ರಾನ್ಸಿಸ್ ಅವರು ಆಕಸ್ಮಿಕವಾಗಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸಹೋದ್ಯೋಗಿಗಳು ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!