ಶ್ರೀಮತಿ ಜ್ಯೋತಿ ವಿನಾಯಕ್ ಭಟ್ ಶಿರ್ಸಿ ಇವರೀಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026

ಕಾಸರಗೋಡು, ಜೂನ್ 20: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008), ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಕನ್ನಡ ಭವನದ ರಜತ ಸಂಭ್ರಮ ಕಾರ್ಯಕ್ರಮಗಳ ಸಮಾರೋಪ ಅಂಗವಾಗಿ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ – 2026” ಜುಲೈ 26, 2026ರಂದು ನಡೆಯಲಿದೆ.

ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ದಿವಂಗತ ಡಾ. ಲಲಿತಾ ಎಸ್.ಎನ್. ಭಟ್ ಅವರ ಹೆಸರಿನ ವೇದಿಕೆಯಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಡಿನಾಡಿನ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕನ್ನಡಿಗರ ಸಮಸ್ಯೆಗಳ ಕುರಿತು ಚರ್ಚಿಸಲು ವೇದಿಕೆಯಾಗಲಿರುವ ಈ ಸಮ್ಮೇಳನದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸಾಹಿತಿಗಳು, ಕಲಾವಿದರು, ಶಿಕ್ಷಣ ತಜ್ಞರು, ಸಮಾಜಸೇವಕರು ಮತ್ತು ಕನ್ನಡಾಭಿಮಾನಿಗಳು ಭಾಗವಹಿಸಲಿದ್ದಾರೆ.

ಸಮ್ಮೇಳನದ ಅಂಗವಾಗಿ ಕನ್ನಡ ಮೆರವಣಿಗೆ, ಉದ್ಘಾಟನಾ ಸಮಾರಂಭ, ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಮಾರೋಪ ಸಮಾರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವು, ಬೆಳೆವಣಿಗೆ ಹಾಗೂ ಗಡಿನಾಡಿನ ಕನ್ನಡಿಗರ ಹಕ್ಕುಗಳ ಕುರಿತಾಗಿ ಮಹತ್ವದ ಚರ್ಚೆಗಳು ನಡೆಯಲಿದ್ದು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!