ಶ್ರೀಮತಿ ಲತಾ ಬಾಳೆಹೊನ್ನೂರು, ಇವರೀಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ “ಅಚೀವ್ಮೆಂಟ್ ಅವಾರ್ಡ್ 2026

ಕಾಸರಗೋಡು, ಜೂನ್ 20: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.223/2008), ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಕನ್ನಡ ಭವನದ ರಜತ ಸಂಭ್ರಮ ಕಾರ್ಯಕ್ರಮಗಳ ಸಮಾರೋಪ ಅಂಗವಾಗಿ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ – 2026” ಜುಲೈ 26ರಂದು ನಡೆಯಲಿದೆ.

ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ದಿವಂಗತ ಡಾ. ಲಲಿತಾ ಎಸ್.ಎನ್. ಭಟ್ ಅವರ ಹೆಸರಿನ ವೇದಿಕೆಯಲ್ಲಿ ಸಮ್ಮೇಳನ ನಡೆಯಲಿದ್ದು, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಗಡಿನಾಡಿನ ಕನ್ನಡಿಗರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಗುವುದು.

ಸಮ್ಮೇಳನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸಾಹಿತಿಗಳು, ಕಲಾವಿದರು, ಶಿಕ್ಷಣ ತಜ್ಞರು, ಸಮಾಜಸೇವಕರು, ಕನ್ನಡಪರ ಹೋರಾಟಗಾರರು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಲಿದ್ದು, ಕನ್ನಡ ಮೆರವಣಿಗೆ, ಉದ್ಘಾಟನಾ ಸಮಾರಂಭ, ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಮಾರೋಪ ಸಮಾರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಗಡಿನಾಡಿನಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವು, ಬೆಳವಣಿಗೆ ಹಾಗೂ ಕನ್ನಡಿಗರ ಹಕ್ಕುಗಳ ಕುರಿತು ಸಮ್ಮೇಳನದಲ್ಲಿ ಮಹತ್ವದ ಚರ್ಚೆಗಳು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!