ಕಾಸರಗೋಡು: ಧಾರವಾಡ ಜಿಲ್ಲೆಯ ಖ್ಯಾತ ಲೇಖಕ, ಸಾಹಿತಿ ಹಾಗೂ ಸಮಾಜಸೇವಕರಾದ ನವೀದ್ ಮುಲ್ಲಾ ಅವರು ಪ್ರತಿಷ್ಠಿತ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026”ಗೆ ಆಯ್ಕೆಯಾಗಿದ್ದಾರೆ.
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ “ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ”ದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.
ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಐಎಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನವೀದ್ ಮುಲ್ಲಾ ಅವರ ಸಾಹಿತ್ಯ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಕುರಿತು ಸಮ್ಮೇಳನ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.