ಪಾಲಿಕೆ ವತಿಯಿಂದಲೇ ಕುದ್ಮುಲ್ ರಂಗರಾವ್ ಜಯಂತಿ ನಡೆಯಬೇಕು :- ಶಾಸಕ ಕಾಮತ್

ದಲಿತೋದ್ದಾರಕ ಕುದ್ಮುಲ್ ರಂಗರಾಯರ ಜಯಂತಿಯು ಪಾಲಿಕೆ ವತಿಯಿಂದಲೇ ನಡೆಯುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ದಲಿತ ಮುಖಂಡರ, ಪಾಲಿಕೆ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಶಾಸಕರು, ಕಳೆದ ಬಾರಿ ಪಾಲಿಕೆ ವತಿಯಿಂದ ರಂಗರಾಯರ ಜಯಂತಿ ಆಚರಿಸದಿರುವುದು ಅತ್ಯಂತ ಬೇಸರದ ಸಂಗತಿ. ಈ ಬಗ್ಗೆ ದಲಿತ ಮುಖಂಡರು ಕುಂದುಕೊರತೆ ಸಭೆಯಲ್ಲೂ ಪ್ರಸ್ತಾಪಿಸಿದ್ದು, ಇಂತಹ ತಪ್ಪುಗಳು ಮರುಕಳಿಸಬಾರದು. ಈ ಹಿಂದೆ ನಮ್ಮ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರಂಗರಾಯರ ಜನ್ಮದಿನಾಚರಣೆ ನಡೆಸಲು ತೀರ್ಮಾನಿಸಲಾಗಿತ್ತು. ಅದೇ ಮಾದರಿಯನ್ನು ಈ ಬಾರಿ ಮುಂದುವರಿಸಿಕೊಂಡು ಹೋಗಬೇಕು, ಮತ್ತು ಅದಕ್ಕೆ ಅಗತ್ಯವಿರುವ ಅನುದಾನವನ್ನು ಪಾಲಿಕೆ ವತಿಯಿಂದಲೇ ಮೀಸಲಿಡಬೇಕು ಎಂದು ಶಾಸಕರ ನೇತೃತ್ವದಲ್ಲಿ ನಿರ್ಣಯಿಸಲಾಯಿತು.

ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್, ಉಪ ಆಯುಕ್ತರಾದ ನರೇಶ್ ಶೆಣೈ, ಸಮಾಜ ಕಲ್ಯಾಣ ಇಲಾಖೆಯ ಸುರೇಶ್ ಅಡಿಗ, ಮಾಲಿನಿ, ನಿಕಟಪೂರ್ವ ಪಾಲಿಕೆ ಸದಸ್ಯ ಶೈಲೇಶ್ ಶೆಟ್ಟಿ, ಶಿವುಕುಮಾರ್, ದಲಿತ ಮುಖಂಡರಾದ ರಘುವೀರ್ ಬಾಬುಗುಡ್ಡೆ, ಶಿವಪ್ಪ ನಂತೂರು, ಹೃದಯನಾಥ್, ಸಂದೀಪ್ ಬೋಳೂರು, ಕಿರಣ್ ಕೊಡಿಯಾಲ್ ಬೈಲ್, ಪ್ರಕಾಶ್ ಕೋಡಿಕಲ್, ಉಮೇಶ್ ಕುಮಾರ್, ದೇವೇಂದ್ರ, ಪ್ರಭಾಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!