SDPI 18ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ 383 ಯೂನಿಟ್ ರಕ್ತ ಸಂಗ್ರಹ

ಮಂಗಳೂರು, ಜೂನ್ 21: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಯ 18ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಬಜ್ಪೆ, ಜೋಕಟ್ಟೆ, ಅಲೇಕಳ ಹಾಗೂ ಮುಲ್ಕಿ ಘಟಕಗಳ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಯುವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು. ಬಜ್ಪೆಯಲ್ಲಿ 153 ಯೂನಿಟ್, ಜೋಕಟ್ಟೆಯಲ್ಲಿ 91 ಯೂನಿಟ್, ಹಳೆಕಳದಲ್ಲಿ 85 ಯೂನಿಟ್ ಹಾಗೂ ಮುಲ್ಕಿಯಲ್ಲಿ 54 ಯೂನಿಟ್ ಸೇರಿದಂತೆ ಒಟ್ಟು 383 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ಸಾಮಾಜಿಕ ಸೇವೆ ಮತ್ತು ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರವು ಯಶಸ್ವಿಯಾಗಿ ನಡೆಯಿತು. ರಕ್ತದಾನ ಮಾಡಿದ ಎಲ್ಲಾ ದಾನಿಗಳು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ವೈದ್ಯಕೀಯ ಸಿಬ್ಬಂದಿ, ಸ್ವಯಂಸೇವಕರು ಹಾಗೂ ಸಾರ್ವಜನಿಕರಿಗೆ SDPI ಮಂಗಳೂರು ನಗರ ಜಿಲ್ಲಾ ಸಮಿತಿಯು ಕೃತಜ್ಞತೆ ಸಲ್ಲಿಸಿದೆ.

ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಸೇವಾ ಕಾರ್ಯಗಳನ್ನು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!