ಯೋಗದಿಂದ ಜೀವನಶೈಲಿ ಕಾಯಿಲೆಗಳಿಗೆ ಪರಿಹಾರ ಸಾಧ್ಯ: ಎಂ.ಎಲ್. ಅಶ್ವಿನಿ

ಕಾಸರಗೋಡು, ಜೂನ್ 22: ಜೀವನಶೈಲಿ ಕಾಯಿಲೆಗಳು ಹಾಗೂ ಮಾನಸಿಕ ಒತ್ತಡಕ್ಕೆ ಯೋಗದ ಮೂಲಕ ಪರಿಣಾಮಕಾರಿ ಪರಿಹಾರ ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದರು.

ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಆಯೋಜಿಸಿದ್ದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ಯೋಗದ ಸಮನ್ವಯದಿಂದ ಆರೋಗ್ಯ ಕ್ಷೇತ್ರದ ಹಲವು ಸವಾಲುಗಳನ್ನು ಎದುರಿಸಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಲವು ಯೋಗ ಚಾಂಪಿಯನ್‌ಶಿಪ್‌ಗಳಲ್ಲಿ ಚಿನ್ನದ ಪದಕ ವಿಜೇತೆ ಕುಮಾರಿ ಅಭಿಜ್ಞಾ ಹಾಗೂ ಯೋಗ ಶಿಕ್ಷಕಿ ತೇಜ ಹರೀಶ್ ಯೋಗ ತರಬೇತಿಗೆ ನೇತೃತ್ವ ವಹಿಸಿದರು.

ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್ ಹಾಗೂ ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!