ಜೂನ್ 23ರಂದು ಮಂಗಳೂರಿನಲ್ಲಿ ಕಾಂಗ್ರೆಸ್‌ನ ಮತದಾರರ ಜಾಗೃತಿ ಸಮಾವೇಶ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಜೂನ್ 23ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.

ಶನಿವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ನಡೆ ಮತ ರಕ್ಷಣೆಯ ಕಡೆ” ಎಂಬ ಧ್ಯೇಯವಾಕ್ಯದಡಿ ಐದು ವಿಭಾಗಗಳಲ್ಲಿ ಈ ಜನಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಜೂನ್ 23ರಂದು ಬೆಳಿಗ್ಗೆ 10.30ಕ್ಕೆ ಸಮಾವೇಶ ಉದ್ಘಾಟನೆಯಾಗಲಿದೆ ಎಂದರು.

ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬೂತ್ ಲೆವೆಲ್ ಅಧಿಕಾರಿಗಳು (ಬಿಎಲ್‌ಒ) ಮತ್ತು ಬೂತ್ ಲೆವೆಲ್ ಏಜೆಂಟರು (ಬಿಎಲ್‌ಎ) ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಪಕ್ಷದ ನಾಯಕರು ಹಾಗೂ ಸಂಪನ್ಮೂಲ ವ್ಯಕ್ತಿಗಳು ತರಬೇತಿ ಮತ್ತು ಮಾಹಿತಿ ನೀಡಲಿದ್ದಾರೆ. ಕಾಂಗ್ರೆಸ್ ಮುಖಂಡ ವಿ.ಆರ್. ಸುದರ್ಶನ್ ಅವರ ಉಸ್ತುವಾರಿಯಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಸಿದ್ದಾರೆ. ಅಲ್ಲದೆ, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಭರವಸೆ ನೀಡಿದ್ದಾರೆ. ಈ ಕ್ರಮಗಳಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ಮತ್ತು ರೂಪ ಸಿಗಲಿದ್ದು, ಬಂಡವಾಳ ಹೂಡಿಕೆದಾರರಿಗೆ ಸಬ್ಸಿಡಿ ಸೇರಿದಂತೆ ವಿವಿಧ ಪ್ರೋತ್ಸಾಹಕ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಹರೀಶ್ ಕುಮಾರ್ ತಿಳಿಸಿದರು

ಮತದಾರರಿಗೆ ಸಮರ್ಪಕ ಮಾಹಿತಿ ದೊರೆತಿಲ್ಲ: ಐವನ್ ಡಿಸೋಜಾ

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಎಸ್‌ಐಆರ್ ಕುರಿತು ಚುನಾವಣಾ ಆಯೋಗ ಮತ್ತು ಅಧಿಕಾರಿಗಳು ಮತದಾರರಿಗೆ ಸಮರ್ಪಕ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

“ಈ ಕಾರಣದಿಂದಲೇ ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡಲ್ಪಟ್ಟಿವೆ. ಜನಜಾಗೃತಿ ಸಮಾವೇಶದ ಮೂಲಕ ಮತದಾರರ ಹಕ್ಕುಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲೆ, ತಾಲೂಕು ಹಾಗೂ ವಿಭಾಗ ಮಟ್ಟದಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು” ಎಂದು ಹೇಳಿದರು.

ಮಾಹಿತಿಯ ಕೊರತೆಯಿಂದ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆ ಕುಸಿಯಬಾರದು. ಈ ಗೊಂದಲಗಳಿಗೆ ಅಧಿಕಾರಿಗಳ ವೈಫಲ್ಯವೇ ಪ್ರಮುಖ ಕಾರಣವಾಗಿದ್ದು, ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೊ, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್ ಪೂಜಾರಿ, ಬಿ.ಕೆ. ಸಲೀಂ, ಪ್ರಕಾಶ್ ಸಾಲ್ಯಾನ್, ವಿಕಾಸ್ ಶೆಟ್ಟಿ, ಜೋಕಿಂ ಡಿಸೋಜಾ, ಇಬ್ರಾಹಿಂ ನವಾಜ್ ಹಾಗೂ ನಝೀರ್ ಬಜಾಲ್ ಉಪಸ್ಥಿತರಿದ್ದ

SHARE
Loading spinner

Leave a Reply

Your email address will not be published. Required fields are marked *

error: Content is protected !!