ನವಜಾತ ಶಿಶು ಮಾರಾಟ ಪ್ರಕರಣ: ವೈದ್ಯ ಸೇರಿದಂತೆ ಇಬ್ಬರ ಬಂಧನ

ಉಡುಪಿ, ಜೂ.22: ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯರು ಸೇರಿದಂತೆ ಇಬ್ಬರನ್ನು ಉಡುಪಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಮತ್ ನರ್ಸಿಂಗ್ ಹೋಮ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಸುರೇಂದ್ರ ಹಾಗೂ ಮಲ್ಪೆ ಸಮೀಪದ ನೇಜಾರು ನಿವಾಸಿ ಪ್ರಕಾಶ್ ಬಂಧಿತ ಆರೋಪಿಗಳಾಗಿದ್ದಾರೆ.

ಸುಬ್ರಹ್ಮಣ್ಯ ನಗರದ ನವಜಾತ ಶಿಶುವೊಂದನ್ನು ಪ್ರಕಾಶ್ ಅವರಿಗೆ ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಉಡುಪಿ ಮಹಿಳಾ ಠಾಣೆ ಪೊಲೀಸರು ನಡೆಸುತ್ತಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ

SHARE
Loading spinner

Leave a Reply

Your email address will not be published. Required fields are marked *

error: Content is protected !!