ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅರಳ ಗ್ರಾಮದ ಬಹುಕಾಲದ ಬೇಡಿಕೆಯಾಗಿದ್ದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.20 ಲಕ್ಷ ವಿಶೇಷ ಅನುದಾನ ಮಂಜೂರಾಗಿದ್ದು, ಕಾಮಗಾರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು.
ಗ್ರಾಮಸ್ಥರ ಬಹುವರ್ಷಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲಾಗಿದ್ದು, ಈ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮಹತ್ವದ ಕೊಡುಗೆಯಾಗಿದೆ ಎಂದು ರಮಾನಾಥ ರೈ ತಿಳಿಸಿದರು.
ಈ ಯೋಜನೆಗೆ ಅನುದಾನ ಮಂಜೂರಾಗಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿಶೇಷ ಆಸಕ್ತಿ ವಹಿಸಿದ್ದು, ಮಾಜಿ ಸಚಿವ ರಮಾನಾಥ ರೈ ಅವರ ಸಹಕಾರವೂ ದೊರೆತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಗ್ರಾಮ ಪಂಚಾಯತ್ ಸದಸ್ಯರಾದ ದೇಜಪ್ಪ ಪೂಜಾರಿ, ನಳಿನಿ ನಾಯ್ಕ್, ಜಗದೀಶ್ ಕೊಯಿಲ, ಎಂ.ಬಿ. ಅಶ್ರಫ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಅಂಚನ್, ಅರಳ ವಲಯ ಕಾಂಗ್ರೆಸ್ ಅಧ್ಯಕ್ಷ ಲತೀಫ್ ಸುಂಟಿಹಿಟ್ಲು, ಅಶ್ರಫ್ ಕುಟ್ಟಿಕಲ್, ಸಂತೋಷ್ ಪಿಂಟೋ, ಸುರೇಶ್ ಜೋರ, ಅಶ್ರಫ್ ಮುಲ್ಲರಪಟ್ಟಣ ಸೇರಿದಂತೆ ಗ್ರಾಮಸ್ಥರು