ಮಂಗಳೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾದ SIR ಜನಜಾಗೃತಿ ಸಮಾವೇಶವು ಮಂಗಳೂರಿನಲ್ಲಿ ಭಾನುವಾರ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಿ.ಕೆ. ಹರಿಪ್ರಸಾದ್ ಅವರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು.
ಬಳಿಕ ನಗರದ ಪುರಭವನದಲ್ಲಿ ಆಯೋಜಿಸಲಾದ ಜನಜಾಗೃತಿ ಸಮಾವೇಶದಲ್ಲಿ ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವಿ.ಆರ್. ಸುದರ್ಶನ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶದಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಸಮಾವೇಶವು ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ವೇದಿಕೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿತು.