ಅಶೋಕನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 25ನೇ ದೇರೆಬೈಲ್ ಪಶ್ಚಿಮ ವಾರ್ಡಿನ ಅಶೋಕನಗರ ಆಯುರ್ವೇದಿಕ್ ಕಾಲೇಜು ರಸ್ತೆ, ಅಶೋಕನಗರ ಜಂಕ್ಷನ್ ಬಲ ಬದಿ ರಸ್ತೆ ಅಭಿವೃದ್ಧಿ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು.

ಈ ವೇಳೆ ಮಾತನಾಡಿದ ಶಾಸಕರು, ಸ್ಥಳೀಯ ಬೇಡಿಕೆಯಂತೆ ಲೋಕೋಪಯೋಗಿ ಇಲಾಖೆಯಿಂದ 30ಲಕ್ಷ ರೂ. ಅನುದಾನವನ್ನು ಹೊಂದಿಸಿಕೊಂಡು ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಜಯಲಕ್ಷ್ಮಿ ಬಿ.ಶೆಟ್ಟಿ, ಗಣೇಶ್ ಕುಲಾಲ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಶಕ್ತಿ ಕೇಂದ್ರ ಅಧ್ಯಕ್ಷರಾದ ಉಮೇಶ್, ಪ್ರಮುಖರಾದ ಅಮಿತ್, ಸುರೇಖಾ, ಪ್ರವೀಣ್ ನಿಡ್ಡೇಲ್, ವರದ, ನರೇಶ್, ಶ್ರೀಕಾಂತ್, ಸಂತೋಷ್, ಪ್ರಕಾಶ್, ದೀಕ್ಷಿತ್, ಸೌಮ್ಯ, ಸವಿತಾ, ಸೇರಿದಂತೆ ರಿಕ್ಷಾ ಚಾಲಕ-ಮಾಲಕರು, ಸ್ಥಳೀಯರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!