ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು, : 2026-27ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‌ಎಸ್‌ಪಿ) ಅಡಿಯಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ.2 ಲಕ್ಷ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಮೀರಿರಬಾರದು.

ಅರ್ಹ ವಿದ್ಯಾರ್ಥಿಗಳು ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಸೆಪ್ಟೆಂಬರ್ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್, ಎಸ್‌ಎಸ್‌ಪಿ ಪೋರ್ಟಲ್, ಸಹಾಯವಾಣಿ 8277799990 ಅಥವಾ ಸಂಬಂಧಿಸಿದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!