ಮಂಗಳೂರು, :- ಮಂಗಳೂರು ಮಹಾನಗರಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ಮುಲ್ ರಂಗರಾವ್ ದಿನಾಚರಣೆ ಜೂನ್ 29 ರಂದು ಬೆಳಿಗ್ಗೆ 10 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೋಕರ್ಣನಾಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ ಉಪನ್ಯಾಸ ನೀಡಲಿದ್ದಾರೆ.