ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ,ಸಾಹಿತ್ಯ, ಸಂಸ್ಕೃತಿ,ಇತಿಹಾಸ ಪರಂಪರೆಯನ್ನು ಅಂತರ ರಾಜ್ಯದ್ಯಂತ ಕನ್ನಡ ಜನತೆಗೆ ತಲುಪಿಸುವ ಉದ್ದೇಶದಿಂದ ಕೇರಳ,ಕರ್ನಾಟಕ ಹಾಗೂ ಅಖಿಲ ಭಾರತ ಮತ್ತು ಆನಿವಾಸಿ ಭಾರತೀಯ ಕನ್ನಡಿಗರು,ಕಲಾವಿದರು, ಸಾಹಿತಿಗಳನ್ನು ಆಮಂತ್ರಿಸಿ ರಾಜ್ಯ,ರಾಷ್ಟ್ರೀಯ,ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸಾಂಸ್ಕೃತಿಕ ವಿನಿಮಯಕ್ಕಾಗಿ ಕಾಸರಗೋಡಿನ ಮೀಪುಗುರಿ- ಪಾರೆಕಟ್ಟೆಯ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7ಮತ್ತು 8ರಂದು ಐತಿಹಾಸಿಕ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ- ಕರ್ನಾಟಕ ಉತ್ಸವ, ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಕೇರಳ – ಕರ್ನಾಟಕ ಭವನ ಸಾಂಸ್ಕೃತಿಕ ಸಮುಚ್ಚಯದ ಶಿಲಾನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ.
ಇದರ ಪೂರ್ವಭಾವಿಯಾಗಿ ದೇಶ, ವಿದೇಶಗಳಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾಂಸ್ಕೃತಿಕ ರಾಯಭಾರಿಗಳ ದುಂಡು ಮೇಜಿನ ಪರಿಷತ್ತು ಚಿಂತನಾ ಸಭೆ ನಡೆಸಿ ಕಾಸರಗೋಡು ಕನ್ನಡ ಸಾಂಸ್ಕೃತಿಕ ರಾಯಭಾರಿಗಳ ಕನ್ನಡ ಯಾತ್ರೆಯ ಮೂಲಕ ಕೇರಳ ರಾಜ್ಯ ಕನ್ನಡ ಸಮ್ಮೇಳನ ಮತ್ತು ಕೇರಳ – ಕರ್ನಾಟಕ ಉತ್ಸವಕ್ಕೆ ವ್ಯಾಪಕವಾಗಿ ಪ್ರಚಾರ ಪಡಿಸಲು ಉದ್ದೇಶಿಸಲಾಗಿದೆ.
ಕೇರಳ ರಾಜ್ಯ ಕನ್ನಡ ಸಮ್ಮೇಳನದಲ್ಲಿ ಉದ್ಘಾಟನೆ ಹಾಗೂ ವಿವಿಧ ಕಲಾ ಪುಸ್ತಕ, ವಸ್ತು ಪ್ರದರ್ಶನಗಳ ಉದ್ಘಾಟನೆ, ಹೊಸ ಕೃತಿಗಳು, ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ, ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ, ರಾಜ್ಯಮಟ್ಟದ ಮಕ್ಕಳ ಕವಿಗೋಷ್ಠಿ ಭಾಷಾ ಬಾಂಧವ್ಯ ಗೋಷ್ಠಿ,ಹಾಸ್ಯ ಗೋಷ್ಠಿ, ಮಾಧ್ಯಮ ಗೋಷ್ಠಿ , ಗಡಿನಾಡು- ಹೊರನಾಡು ಅನಿವಾಸಿ ಭಾರತೀಯ ಕನ್ನಡಿಗರು -ಕನ್ನಡ ಸಂಘಟನೆಗಳು ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಜ್ಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮಾಧ್ಯಮ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಸಾಹಿತ್ಯ ಪ್ರಶಸ್ತಿ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾವ್ಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಸಮಾಜ ಸೇವಾ ಪ್ರಶಸ್ತಿ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕ್ರೀಡಾ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಬ್ಯಾಂಕಿಂಗ್ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಚಲನಚಿತ್ರ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕೃಷಿ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಚಿತ್ರ ಕಲಾ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಉದ್ಯಮ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವೈದ್ಯಕೀಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಯಕ್ಷಗಾನ ಪ್ರಶಸ್ತಿ,ಕರಾವಳಿ ಸಾಂಸ್ಕೃತಿಕಪ್ರತಿಷ್ಠಾನ ಸುಗಮ – ಸಂಗೀತ – ನೃತ್ಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ತುಳು ಭಾಷಾ ಪ್ರಶಸ್ತಿ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅನಿವಾಸಿ ಭಾರತೀಯ ಕನ್ನಡಿಗರು ಪ್ರಶಸ್ತಿ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಸರಕಾರ ಸೇವೆ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಾಪಕ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಕಾಶನ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಧಾರ್ಮಿಕ ಸೇವಾ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮುದ್ರಣೋದ್ಯಮ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ನ್ಯಾಯವಾದಿ ಪ್ರಶಸ್ತಿ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಜನಪ್ರತಿನಿಧಿ ಪ್ರಶಸ್ತಿ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಸೈನಿಕ – ದೇಶ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಹಿರಂಗ ಅಧಿವೇಶನ, ಸಮಾರೋಪ ಸಮಾರಂಭ ನಡೆಯಲಿದೆ.
ಕೇರಳ ಮತ್ತು ಕರ್ನಾಟಕ ರಾಜ್ಯದ ವಿವಿಧ ಕಲಾ ಪ್ರಕಾರಗಳ ಪ್ರದರ್ಶನ ಹಾಗೂ ಪ್ರಸಿದ್ಧ ಚಿತ್ರ ಕಲಾವಿದರಿಂದ ಚಿತ್ರಕಲಾ ಪ್ರದರ್ಶನ ಪ್ರಾತ್ಯಕ್ಷಿಕೆ ನಡೆಯಲಿದೆ. ಸಮೂಹ ನೃತ್ಯ, ಜಾನಪದ ನೃತ್ಯ, ಸುಗಮ ಸಂಗೀತ,ದಾಸ ಸಂಕೀರ್ತನೆ,ಜಾನಪದ ಭಾವಗೀತೆ, ಚಲನಚಿತ್ರ ಗೀತಗಾಯನ,ದೇಶಭಕ್ತಿ ಗೀತೆಗಳ, ಸಮೂಹ ಗಾಯನಕ್ಕೆ ಅವಕಾಶವಿದೆ. ಆಸಕ್ತ ತಂಡಗಳು ಸಂಘ ಸಂಸ್ಥೆಗಳು ಪತ್ರ ಮುಖೇನ ಸಂಪರ್ಕಿಸಬಹುದು.
ಕೇರಳ -ಕರ್ನಾಟಕ ಉತ್ಸವದಲ್ಲಿ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕೇರಳ -ಕರ್ನಾಟಕ ರಾಜ್ಯದ ವಿಶೇಷ ಜನಪದ ಕಲೆ, ಭರತನಾಟ್ಯ ಜಾನಪದ ನೃತ್ಯ, ನೃತ್ಯ ರೂಪಕ, ಐತಿಹಾಸಿಕ, ಚಾರಿತ್ರಿಕ,ಸಾಮಾಜಿಕ ನಾಟಕ ಹಾಗೂ ವಿವಿಧ ಜಾನಪದ ಕಲೆಗಳ ಪ್ರದರ್ಶನಗೊಳ್ಳಲಿರುವುದು. ಕೇರಳ -ಕರ್ನಾಟಕದ ಕಲೆ ಮತ್ತು ಸಂಸ್ಕೃತಿಯನ್ನು ಕಾಸರಗೋಡಿನಲ್ಲಿ ಪ್ರತಿಬಿಂಬಿಸಲಿದೆ. ಕನ್ನಡಗ್ರಾಮದ ಸಮ್ಮೇಳನ ಸಭಾಂಗಣದ ಅಂಗಳದಲ್ಲಿ ವಿಶೇಷವಾಗಿ ವಸ್ತು ಪ್ರದರ್ಶನ, ಪುಸ್ತಕ ಮೇಳ, ವ್ಯಂಗ್ಯ ಚಿತ್ರ ಛಾಯಾಚಿತ್ರ, ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ವಿವಿಧ ಉದ್ಯಮ, ಬ್ಯಾಂಕಿಂಗ್, ಗ್ರಾಮೀಣಾಭಿವೃದ್ಧಿ,ಖಾದಿ, ಕೃಷಿ,ಗುಡಿ ಕೈಗಾರಿಕೆ, ಸ್ವ- ಉದ್ಯೋಗ ಸಂಸ್ಥೆಗಳಿಂದ ತಮ್ಮ ಉತ್ಪನ್ನಗಳ ಪ್ರದರ್ಶನ, ಆಹಾರ ಮಳಿಗೆ ಮತ್ತು ಮಾರಾಟ ಮಳಿಗೆಗಳು ಇರುತ್ತದೆ. ಗಡಿನಾಡಾದ ಕಾಸರಗೋಡಿನ ಕನ್ನಡ ಗ್ರಾಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಕನ್ನಡಿಗರು, ಕನ್ನಡಾಭಿಮಾನಿಗಳು, ವಿವಿಧ ಉಪಭಾಷೆಯವರು, ಸಾಂಸ್ಕೃತಿಕ ರಾಯಭಾರಿಗಳು, ಸಾಹಿತಿಗಳು, ಕಲಾವಿದರು, ಮಾಧ್ಯಮದವರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಸಂಪರ್ಕ :-ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕನ್ನಡ ಗ್ರಾಮ,ಕನ್ನಡ ಗ್ರಾಮ ರಸ್ತೆ, ಕಾಸರಗೋಡು -671121
ಮೊಬೈಲ್ :-9448572016,
9901951965
Email:-Shivarama kasaragod @gmail.com
Karavalisamskrithikaprathistana@gmail.com
ಈ ವಿಳಾಸಕ್ಕೆ ಪತ್ರ ಬರೆಯುವ ಮೂಲಕ ಸಂಪರ್ಕಿಸಬಹುದು.